ಧಾರವಾಡ: ದೇಶಾದ್ಯಂತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಸಿಬ್ಬಂದಿ ನಡೆಸುತ್ತಿರುವ ಮುಷ್ಕರಕ್ಕೆ ನಗರದಲ್ಲಿಯೂ ಕೂಡಾ ಬೆಂಬಲ ವ್ಯಕ್ತವಾಗಿದೆ.
ಬ್ಯಾಂಕ್ ಸಿಬ್ಬಂದಿ ಮುಷ್ಕರ: ಧಾರವಾಡದಲ್ಲಿ ಬ್ಯಾಂಕ್ಗಳ ಬಾಗಿಲು ಬಂದ್
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ ಬ್ಯಾಂಕ್ ಸಿಬ್ಬಂದಿ ನಡೆಸುತ್ತಿರುವ ಮುಷ್ಕರಕ್ಕೆ ಧಾರವಾಡದಲ್ಲಿಯೂ ಕೂಡಾ ಬೆಂಬಲ ವ್ಯಕ್ತವಾಗಿದ್ದು, ಇಂದು ಮುಂಜಾನೆಯಿಂದ ಬ್ಯಾಂಕ್ಗಳು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಸಾಥ್ ನೀಡಿವೆ.
ಬ್ಯಾಂಕ್ ಸಿಬ್ಬಂದಿ ಮುಷ್ಕರ
ವೇತನ ತಾರತಮ್ಯ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇಂದು ಮುಂಜಾನೆಯಿಂದಲೇ ಸರ್ಕಾರಿ ಮತ್ತು ಖಾಸಗಿ ಸ್ವಾಮ್ಯದ ಎಲ್ಲಾ ಬ್ಯಾಂಕುಗಳು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆಗೆ ಸಾಥ್ ನೀಡಿವೆ.ನಾಳೆಯೂ ಮುಷ್ಕರ ಮುಂದುವರೆಯಲಿದೆ.