ಹುಬ್ಬಳ್ಳಿ:ನಗರದಲ್ಲಿ ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಪ್ರತಿಭಟನೆ - ಹುಬ್ಬಳ್ಳಿ ಬ್ಯಾಂಕ್ ನೌಕರರ ಮುಷ್ಕರ
ಬ್ಯಾಂಕ್ ಕಾರ್ಮಿಕ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಬ್ಯಾಂಕ್ ನೌಕರರ ಪ್ರತಿಭಟನೆ
ವೇತನ ಪರಿಷ್ಕರಣೆ, ವಾರದಲ್ಲಿ ಐದು ದಿನ ಕೆಲಸ ಜಾರಿಗೊಳಿಸುವುದು, ಪಿಂಚಣಿ ಮತ್ತು ಕುಟುಂಬ ಪಿಂಚಣಿಯಲ್ಲಿ ಸುಧಾರಣೆ, ಹೊಸ ಪಿಂಚಣಿ ರದ್ದುಗೊಳಿಸುವಂತೆ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಮುಷ್ಕರದಲ್ಲಿ ಹಲವಾರು ಬ್ಯಾಂಕ್ ಸಂಘಟನೆಗಳು ಭಾಗವಹಿಸಿ ಬೆಂಬಲ ಸೂಚಿಸಿ, ಕೂಡಲೇ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಯಿತು.