ಹುಬ್ಬಳ್ಳಿ: ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿಚಾರ ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಅನ್ನು ಯಾರೂ ಧರಿಸಬಾರದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.
ಹುಬ್ಬಳ್ಳಿಯ ಮಿನಿವಿಧಾನಸೌಧ ಆವರಣದಲ್ಲಿ ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದೆ. ಪಿಯುಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು ಆಯಾ ಕಾಲೇಜುಗಳಿಗೆ ಸಂಬಂಧಿಸಿದೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮಾಜಕ್ಕೆ ಧಕ್ಕೆ ತರುವ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಬಾರದು ಎಂದರು.
ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ನೀಡಿರುವ ಬೊಲೆರೋ ವಾಹನಗಳಿಗೆ ಚಾಲನೆ ನೀಡಿದ ಅವರು, ವಿವಿಧ ಇಲಾಖೆಗಳ ಬೇಡಿಕೆಗೆ ಅನುಗುಣವಾಗಿ ವಾಹನಗಳನ್ನು ನೀಡಲಾಗುವುದು. ಇಲಾಖೆಗಳು ತಮಗೆ ಬೇಡಿಕೆಯಿದ್ದರೆ ಪ್ರಸ್ತಾವನೆಯನ್ನು ಸಲ್ಲಿಸಿದ ತರುವಾಯ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.