ಹುಬ್ಬಳ್ಳಿ: ಕಾನೂನು ಜಾರಿಗೆ ತರುವ ಮುನ್ನ ಕೇಂದ್ರ ಸರ್ಕಾರ ಅದರ ಸಾಧಕ-ಬಾಧಕಗಳನ್ನು ಪರಿಶೀಲಿಸಬೇಕು. ಮೊದಲು ಪೌರತ್ವ ತಿದ್ದುಪಡಿ ಕುರಿತು ಎಲ್ಲಾ ರಾಜ್ಯಕ್ಕೂ ಪತ್ರ ಕಳಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ 'ಆನೆ ನಡೆದದ್ದೇ ದಾರಿ' ಎನ್ನುವಂತೆ ವರ್ತಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಆನೆ ನಡೆದದ್ದೇ ದಾರಿ ಎನ್ನುವಂತೆ ವರ್ತಿಸುತ್ತಿದೆ.. ಬಸವರಾಜ ಹೊರಟ್ಟಿ ಕಿಡಿ
ಕಾನೂನು ಜಾರಿಗೆ ತರುವ ಮುನ್ನ ಕೇಂದ್ರ ಸರ್ಕಾರ ಅದರ ಸಾಧಕ-ಬಾಧಕಗಳನ್ನು ಪರಿಶೀಲಿಸಬೇಕು. ಮೊದಲು ಪೌರತ್ವ ತಿದ್ದುಪಡಿ ಕುರಿತು ಎಲ್ಲಾ ರಾಜ್ಯಕ್ಕೂ ಪತ್ರ ಕಳಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ 'ಆನೆ ನಡೆದದ್ದೇ ದಾರಿ' ಎನ್ನುವಂತೆ ವರ್ತಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Basavaraj Horatti
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಮಂಗಳೂರಿನಲ್ಲಿ ಗೋಲಿಬಾರ್ ನಡೆದಿರುವುದು ದುರ್ದೈವದ ಸಂಗತಿ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಹಾವೇರಿಯಲ್ಲಿ ಗೋಲಿಬಾರ್ ಆಗಿತ್ತು. ಗೋಲಿಬಾರ್ ಆಗಿರುವುದು ಸರಿಯಲ್ಲ, ಜನರ ಪ್ರಾಣ ತೆಗೆಯುವಂತಹ ಸರ್ಕಾರ ಇರಬಾರದು ಎಂದು ಹೇಳಿದರು.