ಕರ್ನಾಟಕ

karnataka

ETV Bharat / city

ಎಸ್​ಎಸ್​ಎಲ್​ಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಸಿ: ಶಿಕ್ಷಣ ಸಚಿವರಿಗೆ ಹೊರಟ್ಟಿ ಪತ್ರ - ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರೌಢಶಿಕ್ಷಣ ಸಚಿವರಿಗೆ ಪತ್ರ

ಎಸ್​ಎಸ್​ಎಲ್​ಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಸಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

Basavaraj Horatti
ಹೊರಟ್ಟಿ

By

Published : Apr 15, 2021, 9:37 PM IST

ಹುಬ್ಬಳ್ಳಿ:ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದೂಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನಿಗದಿಯಾದ ಪರೀಕ್ಷೆಗಳನ್ನು ವೇಳಾಪಟ್ಟಿಗೆ ಅನುಗುಣವಾಗಿ ನಡೆಸಿದರೆ ಮಕ್ಕಳ ಕಲಿಕೆ ಹಾಗೂ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ ಎಂದು ಒತ್ತಾಯಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್​​ಗೆ ಪತ್ರ ಬರೆದಿದ್ದಾರೆ.

ಶಿಕ್ಷಣ ಸಚಿವರಿಗೆ ಬಸವರಾಜ ಹೊರಟ್ಟಿ ಬರೆದ ಪತ್ರ

ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೂಡದೆ ನಿಗದಿತ ವೇಳಾಪಟ್ಟಿಯಂತೆ ನಡೆಸಬೇಕು. ಸಿಬಿಎಸ್ಇ ಪಠ್ಯಕ್ರಮ ಹಾಗೂ ಕೇಂದ್ರಿಯ ವಿದ್ಯಾಲಯಗಳಲ್ಲಿ ಪರೀಕ್ಷೆಯನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಎಸ್​ಎಸ್​ಎಲ್​ಸಿ ಮಕ್ಕಳಿಗೆ ಪರೀಕ್ಷೆ ಮಾಡುವ ಒತ್ತಡ ಏಕೆ? ಎಂದು ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಇದು ಸರಿಯಾದ ಕ್ರಮವಲ್ಲ. ಪ್ರಮುಖ ಹಂತಗಳ ಪರೀಕ್ಷೆಗಳಿಗೆ ವ್ಯತ್ಯಯ ಉಂಟಾಗಬಾರದು. ಕರ್ನಾಟಕ ಮಾಧ್ಯಮಿಕ ಪರೀಕ್ಷಾ ಮಂಡಳಿಯು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ ಎಂದರು.

ಕಳೆದ ವರ್ಷದಂತೆ ಈ ವರ್ಷವೂ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವುದು ಸೂಕ್ತ. ಪರೀಕ್ಷೆಗಳನ್ನು ಮುಂದೂಡಿದರೆ ಮಕ್ಕಳು ಕಲಿಕೆಯಿಂದ ದೂರ ಸರಿಯುತ್ತಾರೆ. ಕಲಿಕೆಯ ಬಗ್ಗೆ ಆಸಕ್ತಿಯನ್ನು ಕಳೆದುಕೊಳ್ಳುವಂತಾಗುತ್ತದೆ. ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರೀಕೃತವಾಗಿರುತ್ತದೆ. ಪರೀಕ್ಷೆಗಳನ್ನು ಕೋವಿಡ್-19ರ ಎಲ್ಲಾ ಸುರಕ್ಷತಾ ನಿಯಮಾವಳಿಗಳನ್ನು ಪಾಲಿಸಿ ನಡೆಸುವಂತಾಗಬೇಕು. ಸರ್ಕಾರ ಈ ನಿಟ್ಟಿನಲ್ಲಿ ಮಕ್ಕಳನ್ನು ಸಂರಕ್ಷಿಸಲು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸುರಕ್ಷತಾ ಕ್ರಮ ಜಾರಿಗೊಳಿಸುವ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಚಿವರು ನಿರ್ಧಾರ ತೆಗೆದುಕೊಂಡು ನಿಯಮಗಳ ಪ್ರಕಾರ ಪರೀಕ್ಷೆ ನಡೆಸಬೇಕು ಎಂದಿದ್ದಾರೆ.

ಮಕ್ಕಳ ಹಿತದೃಷ್ಟಿಯಿಂದ ಚಿಂತನೆ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಹೊಣೆ ಹಾಗೂ ಜವಾಬ್ದಾರಿಯಾಗಿರುತ್ತದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ನಕಾರಾತ್ಮಕ ಆಲೋಚನೆಗಳಿಗೆ ಮಣಿಯದೆ, ನಿಯಮಾನುಸಾರ ನಿಗದಿಯಂತೆ ಪರೀಕ್ಷೆ ನಡೆಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರದಲ್ಲಿ ವಿವರಿಸಿದ್ದಾರೆ.

ABOUT THE AUTHOR

...view details