ಹುಬ್ಬಳ್ಳಿ : ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾಗಿ ಲಾಕ್ಡೌನ್ ಜಾರಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಕೇಶ್ವಾಪುರದಲ್ಲಿರುವ ಮೃತ ವಿಶ್ವನಾಥ ಹಿರೇಮಠ ಮತ್ತು ಕಾಡಯ್ಯ ಅವರ ಮನೆಗೆ ತೆರಳಿ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಡೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ ಘೋಷಿಸಿದ್ದು, ಅದನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಿನಿಂದ ಜಾರಿಗೆ ತರಲು ಸೂಚಿಸಲಾಗಿದೆ.