ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಸಿಬಿಐ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳೀಯ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿದ ಸಿಬಿಐ ತನಿಖಾಧಿಕಾರಿ ರಾಕೇಶ ರಂಜನ್ ನೇತೃತ್ವದ ತಂಡ, ಪ್ರಮುಖ ಆರೋಪಿ ಬಸವರಾಜ ಮುತ್ತಗಿಗೆ ಬುಲಾವ್ ನೀಡಿದ್ದು, ಮುತ್ತಗಿ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ.