ಧಾರವಾಡ: ಜಿಲ್ಲೆಯಲ್ಲಿ ತೀವ್ರ ಪೈಪೋಟಿ ನಡುವೆ ನವಲಗುಂದ ಕ್ಷೇತ್ರದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ ಅವರಿಗೆ ಅದೃಷ್ಟ ಒಲಿದಿದೆ. ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆ ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮಾಡಿದ್ದಾರೆ.
ಶಂಕರ್ ಪಾಟೀಲ್ಗೆ ಸಚಿವ ಸ್ಥಾನ: ನವಲಗುಂದದಲ್ಲಿ ಅಭಿಮಾನಿಗಳ ಸಂಭ್ರಮ - Shankar Patil get Ministerial position
ಶಂಕರ್ ಪಾಟೀಲ್ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಸಿಕ್ಕಿರುವ ಹಿನ್ನೆಲೆ ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ನವಲಗುಂದದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
ನವಲಗುಂದ ಶಂಕರ್ ಪಾಟೀಲ್ ಮುನೇನಕೊಪ್ಪ ಪ್ರತಿನಿಧಿಸುವ ಕ್ಷೇತ್ರವಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆಯಾಗುವ ಮೊದಲೇ ಕಾರ್ಯಕರ್ತರು ನಗರದ ವಿವಿಧೆಡೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
ಬಿಜೆಪಿಯಲ್ಲಿ ಇಷ್ಟು ದಿನ ನಗರಕ್ಕೆ ಮೀಸಲಾಗಿರುತ್ತಿದ್ದ ಸಚಿವ ಸ್ಥಾನ ಈ ಬಾರಿ ಗ್ರಾಮೀಣ ಭಾಗಕ್ಕೆ ಒಲಿದಿದ್ದು, ನವಲಗುಂದ ಕ್ಷೇತ್ರದ ಜನರ ಸಂತಸಕ್ಕೆ ಕರಣವಾಗಿದೆ.