ಕರ್ನಾಟಕ

karnataka

ETV Bharat / city

ಸೆ.18, 19ರಂದು ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ: ಮಹೇಶ್ ಟೆಂಗಿನಕಾಯಿ - ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ

ಪ್ರಧಾನಮಂತ್ರಿಗಳ ಜನ್ಮದಿನದ ಹಿನ್ನೆಲೆಯಲ್ಲಿ ಸೇವೆ ಮತ್ತು ಸಮರ್ಪಣೆ ಹೆಸರಿನಲ್ಲಿ ಸೆ.17 ರಿಂದ ಅಕ್ಟೋಬರ್ 7ರ ವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ತಿಳಿಸಿದರು.‌

Hubli
ದಾವಣಗೆರೆಯಲ್ಲಿ ಸೆ.18 ಹಾಗೂ19 ರಂದು ಬಿಜೆಪಿ ಕಾರ್ಯಕಾರಿಣಿ ಸಭೆ - ಮಹೇಶ ಟೆಂಗಿನಕಾಯಿ

By

Published : Sep 16, 2021, 3:22 PM IST

ಹುಬ್ಬಳ್ಳಿ: ಪಕ್ಷ ಸಂಘಟನೆ ಹಾಗೂ ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕಾರಿಣಿ ಸಭೆ ಸೆ.18 ಮತ್ತು 19 ರಂದು ದಾವಣಗೆರೆಯಲ್ಲಿ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ‌ ಕಾರ್ಯದರ್ಶಿ ಮಹೇಶ್​ ಟೆಂಗಿನ‌ಕಾಯಿ‌ ಹೇಳಿದರು.

ದಾವಣಗೆರೆಯಲ್ಲಿ ಸೆ.18 ಹಾಗೂ19 ರಂದು ಬಿಜೆಪಿ ಕಾರ್ಯಕಾರಿಣಿ ಸಭೆ - ಮಹೇಶ ಟೆಂಗಿನಕಾಯಿ

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಭೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್​​ ಸಿಂಗ್, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್​​, ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್​​ ಕುಮಾರ ಕಟೀಲ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. 2 ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್​​ ಚುನಾವಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗುವುದು ಎಂದರು.

ಪ್ರಧಾನಿ‌ ಹುಟ್ಟುಹಬ್ಬಕ್ಕೆ ಬೃಹತ್ ಅಭಿಯಾನ:

ಸೆ.17 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬ ಹಾಗೂ ಅಕ್ಟೋಬರ್ 7ರಂದು ನರೇಂದ್ರ ಮೋದಿ ಮೊದಲ ಬಾರಿ ಗುಜರಾತ್ ಸಿಎಂ ಆಗಿ 20 ವರ್ಷ ಪೂರೈಸುತ್ತಿರುವ ಹಿನ್ನೆಲೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌.ನಡ್ಡಾ ಹಾಗೂ ರಾಜ್ಯ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಅವರ ನೇತೃತ್ವದಲ್ಲಿ ಸೆ.17 ರಿಂದ ಅಕ್ಟೋಬರ್ 7 ರವರೆಗೆ 20 'ಸೇವಾಹಿ ಸಪ್ತಾಹಿ' ಜತೆಗೆ ಸೇವೆ ಮತ್ತು ಸಮರ್ಪಣಾ ಅಭಿಯಾನವನ್ನು ಆಚರಿಸಲಾಗುತ್ತದೆ.

ಸೆ.17 ರಂದು ದೇಶದಲ್ಲಿ 2 ಕೋಟಿ ಲಸಿಕಾ ಗುರಿ ಹೊಂದಿದ್ದು, ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ. ಇದರಲ್ಲಿ ಬೂತ್​​ ಮಟ್ಟದ ನಾಯಕರಿಂದ ಹಿಡಿದು ರಾಷ್ಟ್ರಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ಇದಕ್ಕೆ ಆಯಾ ಜಿಲ್ಲೆಗಳ ಜಿಲ್ಲಾಡಳಿತದ ಸಹಕಾರ ಕೂಡಾ ಇದೆ ಎಂದರು.

ದುರ್ಗಮ್ಮ ಬಿಜವಾಡ ಬಿಜೆಪಿಗೆ ಸೇರ್ಪಡೆ:
ಮಹಾನಗರ ಪಾಲಿಕೆ ಚುನಾವಣೆ ವೇಳೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿದ ದುರ್ಗಮ್ಮ ಬಿಜವಾಡ ಅವರನ್ನು ಪಕ್ಷಕ್ಕೆ ಬರ ಮಾಡಿಕೊಳ್ಳಲಾಯಿತು. ಚುನಾವಣೆ ವೇಳೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆದ್ರೆ ಉಪಮೇಯರ್ ಸ್ಥಾನ ಎಸ್​​ಸಿ ಮಹಿಳೆಗೆ ಮೀಸಲಾಗಿದ್ದು ಬಿಜೆಪಿಯಿಂದ ಗೆದ್ದ 39 ಜನರಲ್ಲಿ ಯಾರೂ ಇಲ್ಲ.

ಹೀಗಾಗಿ ದುರ್ಗಮ್ಮ ಅವರಿಗೆ ಉಪಮೇಯರ್ ಸ್ಥಾನ ನೀಡುವ ಭರವಸೆ ನೀಡಿ ಬರಮಾಡಿಕೊಳ್ಳಲಾಗಿದೆ. ಆದರೆ ದುರ್ಗಮ್ಮ ಈ ವಿಚಾರವನ್ನು ಅಲ್ಲಗಳೆದಿದ್ದು, ನಾವೇ ಪಕ್ಷದ ಸಿದ್ದಾಂತ ನಂಬಿ ಬಂದಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ದಸರಾ ಉದ್ಘಾಟಕರನ್ನು ಸಿಎಂ ಅಂತಿಮಗೊಳಿಸುತ್ತಾರೆ: ಸಚಿವ ಎಸ್‌.ಟಿ.ಸೋಮಶೇಖರ್

ABOUT THE AUTHOR

...view details