ಹುಬ್ಬಳ್ಳಿ: ವ್ಯಾಯಾಮ ಶಾಲೆ, ಜಿಮ್ ಮಾಲೀಕರಿಗೆ ಹಾಗೂ ತರಬೇತುದಾರರಿಗೆ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ನೀಡುವಂತೆ ಒತ್ತಾಯಿಸಿ ಧಾರವಾಡ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ವತಿಯಿಂದ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಲಾಯಿತು.
ವಿಶೇಷ ಅನುದಾನಕ್ಕಾಗಿ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ವತಿಯಿಂದ ಸಚಿವರಿಗೆ ಮನವಿ
ಲಾಕ್ ಡೌನ್ ಸಂದರ್ಭದಲ್ಲಿ ಜಿಮ್ ಹಾಗೂ ವ್ಯಾಯಾಮ ಶಾಲೆಗಳು ಬಂದ್ ಆಗಿದ್ದು, ತರಬೇತುದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ವಿಶೇಷ ಸಹಾಯ ಮಾಡಬೇಕೆಂದು ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ವತಿಯಿಂದ ಮನವಿ ಸಲ್ಲಿಸಲಾಗಿದೆ.
body builders association
ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಾ ಜಿಮ್ ಹಾಗೂ ವ್ಯಾಯಾಮ ಶಾಲೆಗಳು ಸಂಪೂರ್ಣ ಬಂದ್ ಆಗಿದ್ದು, ವ್ಯಾಯಾಮ ಶಾಲೆ, ಜಿಮ್ ಮಾಲೀಕರು ಹಾಗೂ ತರಬೇತುದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ವಿಶೇಷ ಸಹಾಯವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಂಕರ ಪಿಳ್ಳೆ, ಶರೀಫ್ ಮುಲ್ಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.