ಹುಬ್ಬಳ್ಳಿ: ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿದ ಯುವಕನೋರ್ವ ಯುವತಿಯ ನಡತೆಯನ್ನು ಅನುಮಾನಿಸಿ ಆಕೆಯ ಆಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕಲಬುರಗಿಯ ಯುವಕನೊಬ್ಬ ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಮೂಲಕ ಅಶ್ಲೀಲ ಸ್ಕ್ರೀನ್ ಶಾಟ್ ತೆಗೆದಿಟ್ಟುಕೊಂಡು ಯುವತಿ ಹೆಸರಲ್ಲಿಯೇ ನಕಲಿ ಫೇಸ್‌ಬುಕ್ ಖಾತೆ ತೆರೆದು ಅವುಗಳನ್ನು ಪೋಸ್ಟ್ ಮಾಡಿದ್ದಾನೆ. ಸಚಿನ್ ಶರಣಬಸಪ್ಪ ಕಾರ್ಣಿಕ ಎಂಬಾತನೇ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಹುಬ್ಬಳ್ಳಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಓದಿ-ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದು, ಪೊಲೀಸ್ ಠಾಣೆಗೆ ಹೋದ ಯುವತಿ!