ಕರ್ನಾಟಕ

karnataka

ETV Bharat / city

ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಮೋದಿ ಕ್ರಮ ಕೈಗೊಳ್ಳುತ್ತಾರೆ: ಬಿಎಸ್​ವೈ - ಬಿಟ್ ಕಾಯಿನ್ ಕುರಿತು ಯಡಿಯೂರಪ್ಪ ಪ್ರತಿಕ್ರಿಯೆ

ಬಿಟ್ ಕಾಯಿನ್(Bitcoin scam) ಹಗರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆ ಇದ್ದರೆ ಕೊಡಲಿ. ಯಾವುದೇ ಪಕ್ಷದವರು ಕೊಟ್ಟರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

yadiyurappa
ಬಿ.ಎಸ್.ಯಡಿಯೂರಪ್ಪ

By

Published : Nov 18, 2021, 11:48 AM IST

ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣದಲ್ಲಿ (Bitcoin scam) ಯಾರೇ ಭಾಗಿಯಾಗಿದ್ದರೂ ತಪ್ಪಿತಸ್ಥರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆ ಇದ್ದರೆ ಕೊಡಲಿ. ಯಾವುದೇ ಪಕ್ಷದವರು ಕೊಟ್ಟರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಕಾಂಗ್ರೆಸ್​ನಲ್ಲಿ ಬಡಿದಾಟ ಆರಂಭವಾಗಿದ್ದು, ಈಗಾಗಲೇ ಎರಡು ಬಣಗಳಿವೆ. ಕಾಂಗ್ರೆಸ್ ಬಡಿದಾಟದ ಕುರಿತು ಟೀಕೆ, ಟಿಪ್ಪಣಿ ಮಾಡುವುದಕ್ಕೆ ಹೋಗುವುದಿಲ್ಲ. ಪ್ರತಿಪಕ್ಷದವರ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದು ಬಿಎಸ್​ವೈ ತಿಳಿಸಿದರು.

ಬೆಳೆ ಹಾನಿ ಕುರಿತು ಮಾತನಾಡಿದ ಮಾಜಿ ಸಿಎಂ, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಅಧಿಕಾರಿಗಳಿಗೆ ಸಮೀಕ್ಷೆ ಮಾಡಲು ಸೂಚಿಸಿದ್ದಾರೆ. ಎಲ್ಲಿ ಬೆಳೆ ನಾಶವಾಗಿದೆಯೋ ಪರಿಹಾರ ಕೊಡುವುದಕ್ಕೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ABOUT THE AUTHOR

...view details