ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸತ್ಯ. ಆದ್ರೆ ಅದು ಯಾವಾಗ ಅಂತ ನನಗೆ ಗೊತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದರು.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನ ಬದಲಾವಣೆ ಆಗುವುದು ಸತ್ಯ. ದೆಹಲಿ ಬೆಳವಣಿಗೆ ಬಗ್ಗೆ ನಂಗೆ ಗೊತ್ತಿಲ್ಲ. ಆದ್ರೆ ನಂಗೆ ಮಾಹಿತಿ ಇರುವ ಪ್ರಕಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸೋದು ಪಕ್ಕಾ. ಅದು ಯಾವಾಗ ಅಂತ ಗೊತ್ತಿಲ್ಲ ಎಂದು ಹೇಳಿದರು.