ಹುಬ್ಬಳ್ಳಿ: ಸ್ಟೇರಿಂಗ್ ರಾಡ್ ಕಟ್ ಆಗಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜೋಡಳ್ಳಿ ಬಳಿ ನಡೆದಿದೆ.
ಸ್ಟೇರಿಂಗ್ ರಾಡ್ ಕಟ್ ಆಗಿ ಸರ್ಕಾರಿ ಬಸ್ ಪಲ್ಟಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು - ಧಾರವಾಡ ಅಪಘಾತ ಸುದ್ದಿ
ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಜೋಡಳ್ಳಿ ಬಳಿ ರಸ್ತೆ ಪಕ್ಕದ ಕೆರೆ ದಂಡೆಗೆ ಸರ್ಕಾರಿ ಬಸ್ ಪಲ್ಟಿಯಾಗಿದೆ.
ಸ್ಟೇರಿಂಗ್ ರಾಡ್ ಕಟ್ ಆಗಿ ಸರ್ಕಾರಿ ಬಸ್ ಪಲ್ಟಿ
ಕಲಘಟಗಿಯಿಂದ ಧಾರವಾಡಕ್ಕೆ ಹೊರಟಿದ್ದ ಬಸ್ ಜೋಡಳ್ಳಿ ಗ್ರಾಮದ ಬಳಿ ರಸ್ತೆ ಪಕ್ಕದ ಕೆರೆ ದಂಡೆಗೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಹರ್ಷ ಹತ್ಯೆ ಆರೋಪಿಗಳಿಂದ ಜೈಲಿನಿಂದಲೇ ವಿಡಿಯೋ ಕರೆ: ಎಫ್ಐಆರ್ ದಾಖಲು