ಹುಬ್ಬಳ್ಳಿ :ರಾಜ್ಯದ ಜನರು ಸಂಕಷ್ಟದಲ್ಲಿದ್ದಾರೆ. ಆದಷ್ಟು ಬೇಗ ಮಂತ್ರಿಮಂಡಲ ರಚನೆ ಮಾಡಿ ಜನರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಈ ವೇಳೆ ನಾನು ಸಹ ಪ್ರವಾಸ ಮಾಡುತ್ತಿದ್ದೇನೆ. ಆದರೆ, ಬಿಜೆಪಿಯ ಯಾವ ಎಂಎಲ್ಎ ಕೂಡ ಕ್ಷೇತ್ರಕ್ಕೆ ಹೋಗುತ್ತಿಲ್ಲ. ಎಲ್ಲರೂ ಬೆಂಗಳೂರಿನಲ್ಲಿ ಕುಳಿತು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.