ಕರ್ನಾಟಕ

karnataka

ETV Bharat / city

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ಹಿನ್ನೆಲೆ ಹುಬ್ಬಳ್ಳಿ- ಧಾರವಾಡ, ಕೊಪ್ಪಳ, ಕಲಬುರಗಿ, ಗದಗದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

By

Published : Aug 5, 2019, 6:14 PM IST

ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಹುಬ್ಬಳಿ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ:ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ಹಿನ್ನೆಲೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಹುಬ್ಬಳ್ಳಿಯ ದುರ್ಗದ ಬೈಲ್​ನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು, ಮುಖಂಡರು ಸಿಹಿ ಹಂಚಿದರು. ಐತಿಹಾಸಿಕ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. 70 ವರ್ಷದ ಆತಂಕಕ್ಕೆ ಇದೀಗ ತೆರೆ ಎಳೆಯಲಾಗಿದೆ. ಇದರಿಂದ ಜಗತ್ತೇ ಭಾರತವನ್ನು ಕೊಂಡಾಡುವಂತಾಗಿದೆ ಎಂದರು. ಇನ್ನು ಧಾರವಾಡದಲ್ಲೂ ಸಹ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿ ಐತಿಹಾಸಿಕ ನಿರ್ಧಾರ ಹೊರಡಿಸಿದ್ದಕ್ಕೆ ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.

ಗದಗದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ಸೇರಿ ಅಖಂಡ ಭಾರತದ ಪರ ಜಯಘೋಷ ಕೂಗಿದರು. ಈ ವೇಳೆ ಪರಸ್ಪರ ಸಿಹಿ ಹಂಚಿದರು.

ಕೊಪ್ಪಳದಲ್ಲೂ ಸಹ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು‌. ನಗರದ ಗಡಿಯಾರ ಕಂಬ ಸರ್ಕಲ್​ನಲ್ಲಿ ಸೇರಿದ ಕಾರ್ಯಕರ್ತರು, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ 370 ನೇ ವಿಧಿ ಹಾಗೂ 35 (ಎ) ರದ್ದು ಮಾಡಿರುವುದು ಸ್ವಾಗತಾರ್ಹ ಎಂದರು.

ಇನ್ನು ಜಮ್ಮು-ಕಾಶ್ಮೀರದ ಸಮಸ್ಯೆಗಳಿಗೆ ಮುಖ್ಯ ಕಾರಣವಾಗಿದ್ದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ ತೆಗೆದು ಹಾಕುವ ಮೂಲಕ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಕಲಬುರಗಿ ನಗರದ ಎಸ್​ವಿಪಿ ವೃತ್ತದಲ್ಲಿ ಜಮಾಯಿಸಿದ್ದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವದ ನಿರ್ಧಾರಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ರಾಷ್ಟ್ರಪತಿ ಅವರಿಗೂ ಅಭಿನಂದನೆ ಸಲ್ಲಿಸಿದರು.

ABOUT THE AUTHOR

...view details