ಹುಬ್ಬಳ್ಳಿ:ಬೆಳಗಾವಿ ಲೋಕಸಭಾ ಉಪ ಚುನಾವಣೆ ಕುರಿತು ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಚರ್ಚೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜನರು ಬಿಜೆಪಿಯ ಕಾರ್ಯವೈಖರಿಯನ್ನು ನೋಡಿದ್ದಾರೆ. ಜನರಿಗೆ ಬಿಜೆಪಿಯ ಬಗ್ಗೆ ವಿಶ್ವಾಸವಿದೆ ಎಂದರು. ಬೆಳಗಾವಿ ಲೋಕಸಭಾ ಉಪ ಚುನಾವಣೆ ಕುರಿತು ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು ಎಂದರು.