ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಹೊರಟ್ಟಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಕಾರು ಹೊತ್ತಿ ಉರಿದ ಘಟನೆ ನವನಗರದ ಬಿಆರ್ಟಿಎಸ್ ಬಸ್ ನಿಲ್ದಾಣದ ಪೊಲೀಸ್ ಕಮಿಷನರ್ ಕಚೇರಿ ಬಳಿ ನಡೆದಿದೆ.
ಪೊಲೀಸ್ ಕಮಿಷನರ್ ಕಚೇರಿ ಎದುರು ಹೊತ್ತಿ ಉರಿದ ಕಾರು- ವಿಡಿಯೋ - police commissioner's office
ಹುಬ್ಬಳ್ಳಿಯ ನವನಗರದ ಬಿಆರ್ಟಿಎಸ್ ಬಸ್ ನಿಲ್ದಾಣದ ಪೊಲೀಸ್ ಕಮಿಷನರ್ ಕಚೇರಿ ಬಳಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು
ಸುಜುಕಿ ಕಂಪನಿಯ ಬ್ರಿಜರ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಡು ರಸ್ತೆಯಲ್ಲೇ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಕೂಡಲೇ ಕೆಳಗಿಳಿದಿದ್ದಾರೆ.
ಇನ್ನು ಮಳೆ ಬರುತ್ತಿದ್ದಂತೆ ಬೆಂಕಿ ಹೊತ್ತಿ ಉರಿಯಲು ಆರಂಭಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.