ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದೆ.
ಯೋಗೇಶ್ ಗೌಡ ಹತ್ಯೆ ಕೇಸ್: ಆರೋಪಿಗಳು ತಂಗಿದ್ದ ಹೋಟೆಲ್ಗೆ ಸಿಬಿಐ ಟೀಂ
ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳು ತಂಗಿದ್ದ ಹೋಟೆಲ್ಗೆ ತೆರಳಿ ವಿಚಾರಣೆ ನಡೆಸಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ
ಧಾರವಾಡ ನಗರದ ಬೆಳಗಾವಿ ರಸ್ತೆಯಲ್ಲಿರುವ ಹೋಟೆಲ್ವೊಂದಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು, ಲಾಡ್ಜ್ನ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಕೊಲೆ ಆರೋಪಿಗಳು ಘಟನೆ ನಡೆದಾಗ ಇದೇ ಲಾಡ್ಜ್‌ನಲ್ಲಿ ತಂಗಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಭೇಟಿ ನೀಡಿರುವ ಅಧಿಕಾರಿಗಳು, ಲಾಡ್ಜ್ ಸಿಬ್ಬಂದಿ ಬಳಿ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.