ಹುಬ್ಬಳ್ಳಿ :ಲಿಂಗೈಕ್ಯ ತೋಂಟದಾರ್ಯ ಸಿದ್ದಲಿಂಗ ಶ್ರೀಗಳ ಹೆಸರಿನಲ್ಲಿ ಭಾವೈಕ್ಯತೆ ದಿನವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದು, ಬಹಳ ನೋವಿನ ಸಂಗತಿಯಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರ ದಿಂಗಾಲೇಶ್ವರ ಶ್ರೀಗಳು ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯ ದಿವಸ ಸಿಎಂ ಅವರು ಗದಗನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದು ಆಘಾತಕಾರಿ ವಿಷಯವಾಗಿದೆ. ಭಾವೈಕ್ಯತೆಯ ಹೆಸರಾಗಿದ್ದ ಶಿರಹಟ್ಟಿ ಪರಂಪರೆಯನ್ನು ಸಿಎಂ ತಿಳಿದುಕೊಂಡಿಲ್ಲ. ಯಾವುದೋ ಒತ್ತಡಕ್ಕೆ ಮಣಿದು ಈ ನಿರ್ಧಾರ ಘೋಷಿರುವುದು ಸರಿಯಲ್ಲ ಎಂದರು.