ಹುಬ್ಬಳ್ಳಿ:ಸೇವಾ ಹೀ ಸಂಘಟನ್ ಎಂಬ ಪರಿಕಲ್ಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಲು ರಾಜ್ಯ ಬೆಜೆಪಿ ಘಟಕ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು.
ಸೇವಾ ಚಟುವಟಿಕೆ ಮೂಲಕ ವಿಭಿನ್ನವಾಗಿ ನಮೋ ಜನ್ಮದಿನಾಚರಣೆ: ಮಹೇಶ ಟೆಂಗಿನಕಾಯಿ - ಮಹೇಶ ಟೆಂಗಿನಕಾಯಿ
ಸೆಪ್ಟೆಂಬರ್ 17ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತೀ ವರ್ಷದಂತೆ "ಸೇವಾ ಸಪ್ತಾಹ"ದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆಗಳ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದೆ ಎಂದರು.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕರೆಯ ಮೇರೆಗೆ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 2ರವರೆಗೆ ಸೇವಾ ಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮ ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.