ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಎಂಬುವಂತ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಅವಳಿನಗರ ಈಗ ಮತ್ತೊಂದು ಗೌರವದ ಗರಿಯನ್ನು ಮುಡಿಗೇರಿಸಿಕೊಳ್ಳಲು ಸಿದ್ಧವಾಗಿದೆ. ಸಾಕಷ್ಟು ಯೋಜನೆ ಮೂಲಕ ಜನಮನ್ನಣೆ ಪಡೆದಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈಗ ಫ್ಲೈಯಿಂಗ್ ಟ್ರೈನಿಂಗ್ ಸೆಂಟರ್ ಕೂಡ ಆರಂಭ ಮಾಡುವ ಕಾಲ ಸನ್ನಿಹಿತವಾಗುತ್ತಿದೆ.
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಫ್ಲೈಯಿಂಗ್ ಟ್ರೈನಿಂಗ್ ಸೆಂಟರ್ (FTC) ಅನ್ನು ಸ್ಥಾಪಿಸಲು ನಾಗರಿಕ ವಿಮಾನಯಾನ ಸಚಿವಾಲಯ ಚಿಂತನೆ ನಡೆಸಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಹುಬ್ಬಳ್ಳಿಯಲ್ಲಿ FTC ಕೇಂದ್ರವನ್ನು ಸ್ಥಾಪಿಸಲು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಹಾಗೂ ಕೇಂದ್ರ ಸಚಿವರಿಗೆ ಅನುಮೋದಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.