ಹುಬ್ಬಳ್ಳಿ: ಕೊರೊನಾ ವೈರಸ್ ಹರಡದಂತೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಹಳೆ ಬಸ್ ನಿಲ್ದಾಣದಲ್ಲಿ ರಾಸಾಯನಿಕ ಸಿಂಪಡಿಸಲಾಗುತ್ತಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಕೊರೊನಾ ವೈರಸ್ ಹರಡದಂತೆ ಹುಬ್ಬಳ್ಳಿಯಲ್ಲಿ ರಾಸಾಯನಿಕ ಸಿಂಪಡಣೆ..
ಮೋದಿ ಅವರು ವಿದ್ಯಾರ್ಥಿಗೆ ಪಾಠ ಹೇಳಿದ ಹಾಗೆ ಹೇಳಿದ್ದಾರೆ. ಜನ ಅರ್ಥ ಮಾಡಿಕೊಳ್ಳಬೇಕು. ನಿರ್ಲಕ್ಷ್ಯಿಸಿದರೆ 21ವರ್ಷ ಹಿಂದಕ್ಕೆ ಹೋಗುತ್ತೇವೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ರಾಸಾಯನಿಕ ಸಿಂಪಡಣೆ
ಪ್ರಧಾನಿ ಮೋದಿ ಅವರು 21 ದಿನಗಳ ಕಾಲ ದೇಶಾದ್ಯಂತ ಲಾಕ್ಡೌನ್ಗೆ ಕರೆ ನೀಡಿದ್ದಾರೆ. ಎಲ್ಲರೂ ತಾಳ್ಮೆಯಿಂದಿರಬೇಕು. ಆಗ ದೇಶಕ್ಕೆ ಒಳ್ಳೆಯದು ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಜಿಲ್ಲಾಡಳಿತ ರಾಸಾಯನಿಕ ಸಿಂಪಡಣೆ ಮಾಡುತ್ತಿದೆ. ಚೆಕ್‌ಪೋಸ್ಟ್‌ಗಳನ್ನು ನಿನ್ನೆಯಿಂದ ಮಾಡಲಾಗಿದೆ. ಲೋಪದೋಷಗಳು ಕಂಡು ಬಂದಲ್ಲಿ ಸರಿ ಮಾಡಲಾಗುತ್ತದೆ. ಈಗಾಗಲೇ ಜಿಲ್ಲೆಯಲ್ಲಿ ಓರ್ವನಿಗೆ ಕೊರೊನಾ ಸೋಂಕು ತಗುಲಿದೆ. ಆತನ ಆರೋಗ್ಯ ಸ್ಥಿರವಾಗಿದೆ. ನಾಳೆ ಬೆಳಗಾವಿಗೆ ಹೋಗುತ್ತೇವೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದರು.