ಕರ್ನಾಟಕ

karnataka

ETV Bharat / city

ರೈತ ಕಾರ್ಮಿಕ ವಿರೋಧಿ‌ ನೀತಿಗೆ‌ ಖಂಡನೆ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ - ರೈತ ಕಾರ್ಮಿಕ ವಿರೋಧಿ‌ ನೀತಿ‌ ಖಂಡಿಸಿ ಪ್ರತಿಭಟನೆ

ರೈತ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ಸಂಘಟನೆಗಳು ಕಾರ್ಯಕರ್ತರು ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

protest
protest

By

Published : Jul 27, 2020, 3:20 PM IST

ಹುಬ್ಬಳ್ಳಿ:ವಿವಿಧ ರೈತ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖಿಲ ಭಾರತ ಕಿಸಾನ್​ ಸಭಾ ಧಾರವಾಡ ಜಿಲ್ಲಾ ಸಮಿತಿಗಳು ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸರ್ಕಾರದ ವಿರುದ್ದ ಪ್ರತಿಭಟನೆ

ಈ ವೇಳೆ ಕಾರ್ಮಿಕ ವಿರೋಧಿಯಾದ ಮಾಲೀಕರ ಪರವಾದ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಕೈಬಿಡಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ವಾಪಸಾಗಲಿ, ಸಾರ್ವಜನಿಕ ವಲಯದ ಖಾಸಗೀಕರಣವನ್ನು ಕೈಬಿಡಬೇಕು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಕೈಬಿಡಬೇಕೆಂದು ಆಗ್ರಹಿಸಿದರು.

ಸರ್ಕಾರದ ವಿರುದ್ಧ ಪ್ರತಿಭಟನೆ

ತುಟ್ಟಿ ಭತ್ಯೆ ಒಂದು ವರ್ಷ ಮುಂದೂಡುವ ಆದೇಶ ವಾಪಸ್ ಪಡೆಯಬೇಕು, ಆದಾಯ ತೆರಿಗೆ ವ್ಯಾಪ್ತಿಯ ಬರದ ಎಲ್ಲಾ ಕುಟುಂಬಗಳಿಗೆ ಆರು ತಿಂಗಳವರೆಗೆ 7,500 ಆರ್ಥಿಕ ನೆರವು ನೀಡಬೇಕೆಂದು ಆಗ್ರಹಿಸಿ ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details