ಧಾರವಾಡ: ಮರಗಳನ್ನು ಸಂರಕ್ಷಣೆ ಮಾಡಬೇಕಾದ ಅರಣ್ಯ ಇಲಾಖೆ ಅಧಿಕಾರಿಗಳೇ ಅವುಗಳ ಮಾರಣಹೋಮಕ್ಕೆ ನಿಂತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪೂರಕ ಎಂಬಂತೆ ಧಾರವಾಡದ ಮಿನಿವಿಧಾನ ಸೌಧದ ಮುಂದಿರುವ ಮರಗಳನ್ನು ಕಡಿದು ಹಾಕಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳಿಂದಲೆ ಮರಗಳ ಮಾರಣಹೋಮ - Dharwad forest department news
ಧಾರವಾಡದ ಮಿನಿ ವಿಧಾನಸೌಧ ಆವರಣದಲ್ಲಿರುವ ಮರಗಳನ್ನು ಸ್ವತಃ ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟಡಗಳಿಗೆ ಅಡಚಣೆಯಾಗುತ್ತಿದೆ ಎಂಬ ನೆಪವೊಡ್ಡಿ ಬೃಹದಾಕಾರವಾಗಿ ಬೆಳೆದು ನಿಂತ ಮರಗಳನ್ನ ನೆಲಸಮಗೊಳಿಸುತ್ತಿದ್ದಾರೆ.
ಧಾರವಾಡ ಮಿನಿ ವಿಧಾನಸೌಧ
ನಗರದ ಮಿನಿ ವಿಧಾನಸೌಧ ಆವರಣದಲ್ಲಿರುವ ಮರಗಳನ್ನು ಸ್ವತಃ ಅರಣ್ಯ ಇಲಾಖೆ ಅಧಿಕಾರಿಗಳು ಕಟ್ಟಡಗಳಿಗೆ ಅಡಚಣೆಯಾಗುತ್ತಿದೆ ಎಂಬ ನೆಪವೊಡ್ಡಿ ಬೃಹದಾಕಾರವಾಗಿ ಬೆಳೆದು ನಿಂತ ಮರಗಳನ್ನ ನೆಲಸಮಗೊಳಿಸುತ್ತಿದ್ದಾರೆ.
ಒಟ್ಟು 86 ಮರಗಳನ್ನು ಕತ್ತರಿಸಲು ಅರಣ್ಯ ಇಲಾಖೆ ಆದೇಶ ಮಾಡಿದ್ದು, ಇದು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇನ್ನು ಸಾಗವಾನಿ, ಸೇರಿದಂತೆ 86 ಮರಗಳಿಗೆ ಕೊಡಲಿ ಪೆಟ್ಟು ಬಿದ್ದಿದೆ.