ಧಾರವಾಡ: ಮಳೆ ಕಡಿಮೆ ಪ್ರಮಾಣದಲ್ಲಿ ಆಗುತ್ತಿರುವ ಕಾರಣ ಈಗಾಗಲೇ ಮೋಡ ಬಿತ್ತನೆ ಮಾಡೋದಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ಹೇಳಿದ್ದಾರೆ.
ಮೋಡ ಬಿತ್ತನೆಗೆ ಸಚಿವ ಸಂಪುಟ ಅಸ್ತು ಎಂದಿದೆ, ಶೀಘ್ರದಲ್ಲಿ ಶುರುವಾಗುತ್ತೆ- ಸಚಿವ ಆರ್ವಿಡಿ - undefined
ಈ ವೇಳೆಗಾಗಲೇ ರಾಜ್ಯದಲ್ಲಿ ಉತ್ತಮ ಮಳೆಯಾಗಬೇಕಿತ್ತು. ಆದರೆ, ಮಳೆಯಾಗದ ಕಾರಣ ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಒಂದು ಸೆಂಟರ್ ಮಾಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ.
ದೇಶಪಾಂಡೆ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಸಚಿವರು ಈ ಬಗ್ಗೆ ಮಾತನಾಡಿದ್ದಾರೆ. ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಒಂದು ಸೆಂಟರ್ ಮಾಡಿದ್ದೇವೆ ಎಂದರು.ಈ ವೇಳೆಗಾಗಲೇ ಉತ್ತಮ ಮಳೆಯಾಗಬೇಕಿತ್ತು. ಆದರೆ, ಗುಜರಾತ್ನಲ್ಲಿ ಸೈಕ್ಲೋನ್ ಸಮಸ್ಯೆಯಿಂದಾಗಿ ಮಳೆ ಮುಂಗಾರು ತಡವಾಗಿದೆ. ಹಾಗಾಗಿ ಆದಷ್ಟು ಬೇಗ ಮೋಡ ಬಿತ್ತನೆ ಮಾಡುತ್ತೇವೆ ಎಂದು ರೈತರಿಗೆ ಭರವಸೆ ನೀಡಿದರು.