ಹುಬ್ಬಳ್ಳಿ: ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಹಾನಗಲ್, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯ ಖಚಿತ: ಸಿಎಂ ಭವಿಷ್ಯ - ಉಪಚುನಾವಣೆ ಪ್ರಚಾರ
ಹಾನಗಲ್ನಲ್ಲಿ ಉಪ ಚುನಾವಣೆ ಪ್ರಚಾರ ಪ್ರಾರಂಭ ಮಾಡಿದ್ದೇನೆ. ನನಗೆ ಸಂಪೂರ್ಣ ವಿಶ್ವಾಸವಿದೆ, ಹಾನಗಲ್ ಮತ್ತು ಸಿಂದಗಿಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
![ಹಾನಗಲ್, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಜಯ ಖಚಿತ: ಸಿಎಂ ಭವಿಷ್ಯ ಬೊಮ್ಮಾಯಿ](https://etvbharatimages.akamaized.net/etvbharat/prod-images/768-512-13376972-thumbnail-3x2-lek.jpg)
ಬೊಮ್ಮಾಯಿ
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ನಲ್ಲಿ ಚುನಾವಣೆ ಪ್ರಚಾರ ಪ್ರಾರಂಭ ಮಾಡಿದ್ದೇನೆ. ನನಗೆ ಸಂಪೂರ್ಣ ವಿಶ್ವಾಸವಿದೆ, ಈ ಎರಡೂ ಕ್ಷೇತ್ರಗಳಿಗೆ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ
ಹಾನಗಲ್ಗೆ ಬೊಮ್ಮಾಯಿ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಹಾನಗಲ್ಗೆ 2,400 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇನೆ, ನೀವು ಎಷ್ಟು ಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದರು.
Last Updated : Oct 17, 2021, 1:08 PM IST