ಹುಬ್ಬಳ್ಳಿ: ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಒಡೆದು ಹೋಳಾಗುತ್ತಿದೆ. ಈ ಕುರಿತು ಡಿ.ಕೆ. ಶಿವಕುಮಾರ್ ಗಮನ ಹರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಹಾನಗಲ್ ಚುನಾವಣೆ ಬಳಿಕ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಸಿಂದಗಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸಿದೆ. ಆದ್ರೆ ದೇಶದಲ್ಲಿ ಕಾಂಗ್ರೆಸ್ ಹೋಳಾಗುತ್ತಿದೆ. ಅದರ ಬಗ್ಗೆ ಶಿವಕುಮಾರ್ ಗಮನಹರಿಸಲಿ ಎಂದರು.