ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡೋದನ್ನ ಸಹಿಸಲ್ಲ: ಸಿಎಂ ಬೊಮ್ಮಾಯಿ ಖಡಕ್​ ಎಚ್ಚರಿಕೆ

ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡಬಾರದು. ಏನೇ ಹೇಳುವುದಿದ್ದರೂ ಶಾಂತಿಯುತವಾಗಿ ಹೇಳಬೇಕು ಎಂದು ಸಿಎಂ ಬೊಮ್ಮಾಯಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.

Karnataka CM Basavaraj Bommai
ಮುಖ್ಯಂಮಂತ್ರಿ ಬಸವರಾಜ ಬೊಮ್ಮಾಯಿ

By

Published : Dec 19, 2021, 10:41 AM IST

Updated : Dec 19, 2021, 10:53 AM IST

ಹುಬ್ಬಳ್ಳಿ: ಬೇರೆ ಬೇರೆ ವಿಷಯ ತಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದನ್ನ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಗೇಡಿಗಳಿಗೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ.

ಬೆಳಗಾವಿ ಗಲಭೆ ಪ್ರಕರಣ: ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆ ಮಾಡಿದ್ದೇವೆ ಎಂದರು.

ಆದ್ರೆ, ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡಬಾರದು. ಏನೇ ಹೇಳುವುದಿದ್ದರೂ ಶಾಂತಿಯುತವಾಗಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಭಂಗ ತರುವುದಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಯಾರೇ ಹೋರಾಟ ಮಾಡಿದ್ರು, ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಮತಾಂತರ ಕಾಯ್ದೆ ನಿಷೇಧ ಕಾಯ್ದೆ ಜಾರಿಗೆ ತಂದೇ ತರುತ್ತೇವೆ: ಬಿಎಸ್​​ವೈ ಶಪಥ

Last Updated : Dec 19, 2021, 10:53 AM IST

ABOUT THE AUTHOR

...view details