ಹುಬ್ಬಳ್ಳಿ:ಹವಾಮಾನ ವೈಪರೀತ್ಯದಿಂದ ವಿಮಾನ ತಡವಾಗಿ ಲ್ಯಾಂಡಿಂಗ್ ಆಗಿದೆ. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವ್ನಲ್ಲಿಂದು ಮತ ಚಲಾವಣೆ ಮಾಡುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಒಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗು ಹೊಸ ವರ್ಷಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು, ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಈ ನಿಟ್ಟಿನಲ್ಲಿ ಕಾಮಗಾರಿ ಆರಂಭಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ.
ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಕಿಸಾನ್ ಆ್ಯಪ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದು ಸಿಎಂ ತಿಳಿಸಿದರು.
ಇದನ್ನೂ ಓದಿ:ಹವಾಮಾನ ವೈಪರೀತ್ಯ: ಹುಬ್ಬಳ್ಳಿಯಲ್ಲಿ ತಡವಾಗಿ ಲ್ಯಾಂಡ್ ಆದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ