ಹುಬ್ಬಳ್ಳಿ: ಒಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಜಿನೋಮಿಕ್ ಸೀಕ್ವೆನ್ಸ್ ಟೆಸ್ಟಿಂಗ್ ಲ್ಯಾಬ್ಗಳನ್ನು ಹೆಚ್ಚಿಸಲು ಚಿಂತನೆ ನಡೆಸಲಾಗಿದೆ. ಪರಿಣತರ ಜೊತೆ ಚರ್ಚಿಸಲು ಈಗಾಗಲೇ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇವೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕೆ ಹುಬ್ಬಳ್ಳಿಗೆ ಆಗಮಿಸಿರುವ ಸಿಎಂ ತಮ್ಮ ನಿವಾಸದ ಬಳಿ ಮಾತನಾಡಿ ಎಲ್ಲಾ ಕೊರೊನಾ ಕೇಸ್ಗಳ ಜಿನೋಮ್ ಸೀಕ್ವೆನ್ಸ್ ಟೆಸ್ಟ್ ಮಾಡ್ತಿದ್ದೇವೆ. ಆದಷ್ಟು ಬೇಗ ವರದಿ ಬರುವಂತೆ ಕ್ರಮ ಕೈಗೊಳ್ಳುತ್ತೇವೆ ಎಂದರು.
'ಕವಟಗಿಮಠ ಗೆಲುವು ನಿಶ್ಚಿತ':
ಬೆಳಗಾವಿಯಲ್ಲಿ ಸಭೆ ಇದೆ. ಪಕ್ಷದ ಶಾಸಕರು ಮತ್ತು ಮುಖಂಡರ ಸಭೆ ಕರೆದಿದ್ದೇವೆ. ನಮ್ಮ ಅಭ್ಯರ್ಥಿ ಗೆಲ್ಲೋಕೆ ಏನೆಲ್ಲಾ ಸೂಚನೆ ನೀಡಬೇಕು ಅದನ್ನು ಮಾಡುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ. ನಮ್ಮ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವು ನಿಶ್ಚಿತ. ಲಖನ್ ಜಾರಕಿಹೊಳಿ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ. ನಮಗೇನೂ ಸಂಬಂಧವಿಲ್ಲ ಎಂದಿದ್ದಾರೆ.