ಕರ್ನಾಟಕ

karnataka

ETV Bharat / city

ಸಿಎಂ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ; ಶೆಟ್ಟರ್ - ಸಿಎಂ ಜಗದೀಶ ಶೆಟ್ಟರ್ ವಿಶ್ವಾಸ

ರಾಜ್ಯದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಜಾಪ್ರಭುತ್ವ ವಿರೋದಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಹುಬ್ಬಳ್ಳಿಯಲ್ಲಿ ಹೇಳಿದರು.

ಮಾಜಿ ಸಿಎಂ ಜಗದೀಶ ಶೆಟ್ಟರ್

By

Published : Apr 14, 2019, 1:49 PM IST

ಹುಬ್ಬಳ್ಳಿ: ಸಿಎಂ ಕುಮಾರಸ್ವಾಮಿ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಪ್ರಚಂಡ ಬಹುಮತದಿಂದ ಜಯಶಾಲಿಯಾಗುತ್ತಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್,​ ಸಿಎಂ ಹೆಚ್​ಡಿಕೆ ವಿರುದ್ಧ ಹರಿಹಾಯ್ದರು.

ನಗರದಲ್ಲಿಂದು ಅಂಬೇಡ್ಕರ್ ಜಯಂತ್ಯುತ್ಸವ ಪ್ರಯುಕ್ತವಾಗಿ ಅಂಬೇಡ್ಕರ್ ಪುತ್ಥಳಿಕೆಗೆ ಮಾಲಾರ್ಪಣೆ ಮಾಡಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಶೆಟ್ಟರ್​, ರಾಜ್ಯದ ಮುಖ್ಯಮಂತ್ರಿಯಾಗಿ ಹೆಚ್​ಡಿಕೆ ಪ್ರಜಾಪ್ರಭುತ್ವದ ವಿರೋಧಿಯಾಗಿ ಮಾತನಾಡುತ್ತಿದ್ದಾರೆ. ಅದು ಅವರ ಸ್ಥಾನಕ್ಕೆ ಗೌರವ ಸೂಚಕವಲ್ಲ. ಇಂತಹ ಮಾತುಗಳನ್ನಾಡುವುದನ್ನು ಕುಮಾರಸ್ವಾಮಿ ಅವರು ಕೈ ಬಿಡಬೇಕು ಎಂದು ಆಗ್ರಹಿಸಿದರು.

ಇನ್ನು ಮಂಡ್ಯ ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಅವರು, ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್​ ಅವರು ಬಹುಮತದಿಂದ ಆಯ್ಕೆಯಾಗುವ ಮೂಲಕ ಸಂಸದರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details