ಕರ್ನಾಟಕ

karnataka

ETV Bharat / city

ಪರಿಷತ್ ಚುನಾವಣೆ: ಕಾಂಗ್ರೆಸ್‌, ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಮುಂದುವರೆದ ಫೈಟ್!

ಡಿ.10 ರಂದು ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್‌ಗೆ ಚುನಾವಣೆ ನಡೆಯುತ್ತಿದೆ. ಹಾವೇರಿ, ಗದಗ, ಧಾರವಾಡ ಜಿಲ್ಲೆಯ ಚುನಾಯಿತ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಟಿಕೆಟ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದೆ.

Competition for Council election ticket in Congress and Bjp
ಪರಿಷತ್ ಚುನಾವಣೆ: ಕಾಂಗ್ರೆಸ್‌, ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಮುಂದುವರೆದ ಫೈಟ್

By

Published : Nov 18, 2021, 2:23 AM IST

Updated : Nov 18, 2021, 2:49 AM IST

ಹುಬ್ಬಳ್ಳಿ:ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಯಾರಿಕೆ ಟಿಕೆಟ್‌ ನೀಡಬೇಕು ಎಂಬುದರ ಬಗ್ಗೆ ಕೈ ನಾಯಕರು ಸರಣಿ ಸಭೆ ನಡೆಸುತ್ತಿದ್ದರೆ, ಇತ್ತ ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ಕ್ಷೇತ್ರಕ್ಕೆ ಕಾಂಗ್ರೆಸ್‌ನಲ್ಲಿ ಡಜನ್‌ಗೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಇದರಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಪಕ್ಕಾ ಆಗಿದ್ದು, ಕಮಲ ಪಾಳಯದಿಂದ ಪ್ರದೀಪ ಶೆಟ್ಟರ್‌ಗೆ ಟಿಕೆಟ್ ನೀಡಲಾಗುತ್ತೆ ಎಂದು ಹೇಳುತ್ತಿದ್ರೂ ಹೈಕಮಾಂಡ್ ನಿಲುವು ಮಾತ್ರ ನಿಗೂಢವಾಗಿದೆ.

ಡಿಸೆಂಬರ್ 10 ರಂದು ಅವಿಭಾಜ್ಯ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್‌ಗೆ ಚುನಾವಣೆ ನಡೆಯುತ್ತಿದೆ. ಹಾವೇರಿ, ಗದಗ, ಧಾರವಾಡ ಜಿಲ್ಲೆಯ ಚುನಾಯಿತ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಟಿಕೆಟ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಸಂಬಂಧ ಮಾಜಿ ಸಿಎಂ ಶೆಟ್ಟರ್‌ ಮಾತನಾಡಿದರು

ಅವಿಭಾಜ್ಯ ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಶಿಗ್ಗಾವಿ ಮತ್ತು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯದಡಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುತ್ತಿದ್ರು, ಗೆಲುವು ಮರೀಚಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಪರಿಷತ್ ಟಿಕೆಟ್ ಅಲ್ಪಸಂಖ್ಯಾತರಿಗೆ ನೀಡಬೇಕೆಂಬ ವಾದ ಮುನ್ನೆಲೆಗೆ ಬಂದಿದೆ.

ಅಲ್ಪಸಂಖ್ಯಾತರಕೋಟಾದಡಿ ಟಿಕೆಟ್‌ಗಾಗಿ ಪೈಪೋಟಿ

ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಇಸ್ಮಾಯಿಲ್ ‌ತಮಾಟಗಾರ, ಮಾಜಿ ಸಂಸದ ಪ್ರೋ.ಐ.ಜಿ.ಸನದಿ, ಶಾಕೀರ ಸನದಿ ಅಲ್ಪಸಂಖ್ಯಾತರಕೋಟಾದಡಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಕಳೆದ ಎರಡು ಅವಧಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ಗೆ ಟಿಕೆಟ್ ಬಹುತೇಕ ಫೈನಲ್‌ ಎನ್ನಲಾಗುತ್ತಿದೆ.

ಇತ್ತ ಬಿಜೆಪಿಯಲ್ಲೂ ಇದೆ ತುರುಸು ಕಂಡು ಬರುತ್ತಿದ್ದು, ಹಾಲಿ ಪ್ರದೀಪ ಶೆಟ್ಟರ್ ಸದಸ್ಯರಾಗಿದ್ದು, ಅವರಿಗೆ ಮತ್ತೆ ಟಿಕೆಟ್ ನೀಡಲಾಗುವುದು ಎಂಬ ಮಾತು ಕೇಳಿ ಬರುತ್ತಿವೆ. ಬ್ಯಾಡಗಿಯ ಮಾಜಿ‌ ಶಾಸಕ ಸುರೇಶ ಗೌಡ ಪಾಟೀಲ ಪುತ್ರ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆ. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಮುಂತಾದವರು ಆಕಾಂಕ್ಷಿಗಳಾಗಿದ್ದಾರೆ. ಪ್ರದೀಪ ಶೆಟ್ಟರ್ ಕಲಘಟಗಿಯತ್ತ ಉತ್ಸುಕರಾಗಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಕುಟುಂಬ ರಾಜಕಾರಣಕ್ಕೆ ಮತ್ತೆ ಬ್ರೇಕ್‌?

ಟಿಕೆಟ್ ವಿಚಾರವಾಗಿ ದಾವಣಗೆರೆಯ ಕಾರ್ಯಕಾರಿಣಿ ಸಭೆಯಲ್ಲಿ ಒಂದು ಸುತ್ತಿನ ಮಾತುಕತೆ ಮುಗಿದಿದೆ. ಈಗ ಮತ್ತೆ ಬಿಜೆಪಿ ಪಾಳಯದಲ್ಲಿ ಸಭೆ ನಡೆಯುತ್ತಿದ್ದು, ಕುಟುಂಬ ರಾಜಕಾರಣಕ್ಕೆ ಮಣೆ ಹಾಕದೆ ಹಾನಗಲ್‌ನಲ್ಲಿ ಉದಾಸಿ ಕುಟುಂಬಕ್ಕೆ ಟಿಕೆಟ್ ತಪ್ಪಿಸಿದಂತೆ, ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ನೀಡದೆ ಹೊಸ ಮುಖಗಳಿಗೆ ಟಿಕೆಟ್ ನೀಡಿದ್ರು ಆಶ್ಚರ್ಯವಿಲ್ಲ.

ಸಾಮಾನ್ಯವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ಒಬ್ಬರೆ ಅಭ್ಯರ್ಥಿಯನ್ನ ಕಣಕ್ಕಿಳಿಸೋದು ಸಂಪ್ರದಾಯ. ಆದ್ರೆ ಈ ಬಾರಿ ಒಬ್ಬರನ್ನು ಕಣಕ್ಕಿಳಿಸಬೇಕೋ, ಇಬ್ಬರನ್ನು ಹುರಿಯಾಳಾಗಿಸಬೇಕೆಂಬ ಬಗ್ಗೆ ಚಿಂತನೆ ನಡೆಸಿದ್ದು, ಎರಡು ಪಕ್ಷಗಳ ಅಭ್ಯರ್ಥಿಗಳು ಇನ್ನೂ ಅಂತಿಮ ಮಾಡಿಲ್ಲ. ಹೀಗಾಗಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಕುತೂಹಲ ಮೂಡಿದೆ.

Last Updated : Nov 18, 2021, 2:49 AM IST

ABOUT THE AUTHOR

...view details