ಹುಬ್ಬಳ್ಳಿ: ಯುವತಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೂರು ನೀಡಿರುವ ಯುವತಿ ಇನ್ಸ್ಟಾಗ್ರಾಮ್ನಲ್ಲಿ ಎರಡು ವರ್ಷಗಳಿಂದ ಖಾತೆ ಓಪನ್ ಮಾಡಿದ್ದು, ಯುವತಿಗೆ ಸೋನು ನವೀನ್ ಹೆಸರಿನ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ ಬಳಿಕ ಯುವತಿಯ ಇನ್ಸ್ಟಾಗ್ರಾಮ್ನಲ್ಲಿದ್ದ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡುತ್ತೇನೆಂದು ಹೆದರಿಸಿದ್ದಾನೆ ಎನ್ನಲಾಗಿದೆ.