ಹುಬ್ಬಳ್ಳಿ: 100 ನಾಟ್ಔಟ್ (ತೈಲ ದರ) ಘೋಷಣೆ ಅಡಿ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಐದು ದಿನ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ಕರೆ ಕೊಟ್ಟಿದೆ. ಅದರಂತೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಲೆಟ್ ಬೈಕ್ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಕಳೆದ 12 ತಿಂಗಳುಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 30 ರೂಪಾಯಿಯಷ್ಟು ಹೆಚ್ಚಳವಾಗಿದೆ. ಇದೀಗ ರಾಜ್ಯಸರ್ಕಾರ ವಿದ್ಯುತ್ ದರವನ್ನೂ ಹೆಚ್ಚಿಸಿದೆ. ಪೆಟ್ರೋಲ್ ಬೆಲೆ 100ರ ಗಡಿ ದಾಡಿದೆ. ಇದು ಅಂತಾರಾಷ್ಟ್ರೀಯ ತೈಲ ಕಂಪನಿಗಳು ಏರಿಕೆ ಮಾಡಿದ್ದರಿಂದಾಗಿಲ್ಲ. ಬದಲಾಗಿ ಮೋದಿ ಸರ್ಕಾರದ ಇಂಧನದ ಮೇಲಿನ ಕಠಿಣ ತೆರಿಗೆಯಿಂದಾಗಿ ಹೆಚ್ಚಳವಾಗಿದೆ.