ಹುಬ್ಬಳ್ಳಿ: ಮೈತ್ರಿ ಸರ್ಕಾರ ಪತನವಾಗಲು ಬಿಜೆಪಿಯೇ ಕಾರಣ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಹಣದ ಆಮಿಷವೊಡ್ಡಿ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆಪರೇಷನ್ ಕಮಲ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಆಪರೇಷನ್ ಕಮಲ ವಿರೋಧಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ - undefined
ಮೈತ್ರಿ ಸರ್ಕಾರ ಪತನವಾಗಲು ಬಿಜೆಪಿಯೇ ಕಾರಣ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಹಣದ ಆಮೀಷವೊಡ್ಡಿ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆಪರೇಷನ್ ಕಮಲ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
![ಆಪರೇಷನ್ ಕಮಲ ವಿರೋಧಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-3945467-thumbnail-3x2-lek.jpg)
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಿಜೆಪಿ ವಿರುದ್ದ ಘೋಷಣೆ ಕೂಗಿ ಕೆಲ ಕಾಲ ರಸ್ತೆ ತಡೆ ನಡೆಸಿದರು. ಮೈತ್ರಿ ಸರ್ಕಾರ ಪತನವಾಗಲು ಬಿಜೆಪಿಯೇ ಕಾರಣ. ಬಿಜೆಪಿಯವರು ಪ್ರಜಾಪ್ರಭುತ್ವದ ಕಗ್ಗೊಲೆ ಹಾಗು ಸಂವಿಧಾನಕ್ಕೆ ದಕ್ಕೆ ತರುವಂತಹ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಪ್ರತಿಭಟನೆಯಲ್ಲಿ ನೂರಾರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಕೆಲ ಕಾಲ ಮಾತಿನ ಚಕಮಕಿ ನಡೆಯಿತು. ನಂತರ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಿದರು.