ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಮಧ್ಯೆ ನೇರಾನೇರ ಸ್ಪರ್ಧೆ ಇದ್ದು, ಮೈತ್ರಿ ಅಭ್ಯರ್ಥಿ ಕುಸುಮಾ ಗೆಲ್ಲುವುದು ಖಚಿತ ಎಂದು ಮಾಜಿ ಶಾಸಕ ಜೆಡಿಎಸ್ ನ ಎಮ್.ಎಸ್.ಅಕ್ಕಿ ಹೇಳಿದರು.
ಮೈತ್ರಿ ಅಭ್ಯರ್ಥಿ ಕುಸುಮಾ ಜಯ ಖಚಿತ: ಮಾಜಿ ಶಾಸಕನ ಅಚಲ ವಿಶ್ವಾಸ - KN_HBL_05_19_ms akki voting_yallappa_KA10025
ಕುಂದಗೋಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 8000 ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಜೆಡಿಎಸ್ ನ ಮಾಜಿ ಶಾಸಕ ಎಂ.ಎಸ್.ಅಕ್ಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ
ಕುಂದಗೋಳ ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ, ಜೆಡಿಎಸ್ ನ ಮಾಜಿ ಶಾಸಕ ಎಮ್.ಎಸ್.ಅಕ್ಕಿ ಕುಟುಂಬ ಹಾಗೂ ಬೆಂಬಲಿಗರ ಜೊತೆ ಆಗಮಿಸಿ ಮತದಾನ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಂ.ಕುಮಾರಸ್ವಾಮಿಯವರು ನಡೆಸುತ್ತಿರುವ ಆಡಳಿತ ಹಾಗೂ ರೈತರ ಬಗ್ಗೆ ಅವರಿಗೆ ಇರುವ ಕಾಳಜಿ ಅಪಾರವಾದದ್ದು, ಇದರಿಂದ ಮೈತ್ರಿ ಅಭ್ಯರ್ಥಿಗೆ ಕುಂದಗೋಳ ಜನತೆ ಬೆಂಬಲ ಸೂಚಿಸಿದ್ದಾರೆ.
ದಿವಂಗತ ಸಿಎಸ್ ಶಿವಳ್ಳಿಯವರು ಮಾಡಿದ ಅಭಿವೃದ್ಧಿ ಹಾಗೂ ಜನಪರ ಕೆಲಸ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತೆ. ಈ ಹಿನ್ನೆಲೆಯಲ್ಲಿ ಕುಸುಮಾ ಶಿವಳ್ಳಿ ಗೆಲುವು ಪಕ್ಕಾ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Last Updated : May 21, 2019, 12:37 AM IST