ಧಾರವಾಡ: ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಧಾರವಾಡದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ - ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆಗೆ ಬಿಜೆಪಿ ಆಗ್ರಹ
ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
![ಧಾರವಾಡದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-3790923-thumbnail-3x2-protest.jpg)
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪ್ರಸ್ತುತ ಬೆಳವಣಿಗೆ ಬಗ್ಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ಬಿಜೆಪಿಯವರು ಅಸಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಆಮಿಷ ಒಡ್ಡುತ್ತಿದ್ದಾರೆ. ಇದರಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.