ಹುಬ್ಬಳ್ಳಿ:ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ನೀಡದೇ ಇರುವುದನ್ನು ಖಂಡಿಸಿ ಕುಂದಗೋಳ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ.. ಕುಂದಗೋಳದಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ.. - ಮಾಜಿ ಸಚಿವ ದಿ.ಸಿ.ಎಸ್. ಶಿವಳ್ಳಿ
ನೆರೆ ಪರಿಹಾರಲ್ಲಿ ತಾರತಮ್ಯ, ಆಶ್ರಯ ಮನೆ ಫಲಾನುಭವಿಗಳಿಗೆ 1 ಲಕ್ಷ ರೂ. ನೀಡಿ, ಮತ್ತೆ ಅದನ್ನ ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ಖಂಡಿಸಿದರು.

ಕಾಂಗ್ರೆಸ್ ಪ್ರತಿಭಟನೆ
ಮಾಜಿ ಸಚಿವ ದಿ.ಸಿ ಎಸ್ ಶಿವಳ್ಳಿ ಸಹೋದರ ಮುತ್ತಣ್ಣ ಶಿವಳ್ಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರದ ಮಲತಾಯಿ ಧೋರಣೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ಹುಬ್ಬಳ್ಳಿ- ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಬಂದ್ ಮಾಡಿದರು.
ಕಾಂಗ್ರೆಸ್ ಮುಖಂಡ ಮುತ್ತಣ್ಣ ಶಿವಳ್ಳಿ ನೇತೃತ್ವದಲ್ಲಿ ಪ್ರತಿಭಟನೆ..
ನೆರೆ ಪರಿಹಾರ ನೀಡುವಲ್ಲಿ ತಾರತಮ್ಯ, ಮನೆ ನಿರ್ಮಾಣ ಮಾಡಲು ಒಂದು ಲಕ್ಷ ನೀಡಿ ಮತ್ತೆ ವಾಪಸ್ ಪಡೆದಿರುವುದಕ್ಕೆ ರೊಚ್ಚಿಗೆದ್ದ ಫಲಾನುಭವಿಗಳೂ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ಕ್ರಮ ಖಂಡಿಸಿದರು.