ಧಾರವಾಡ: ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.
ಧಾರವಾಡದಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್..ಸೋಂಕಿತರ ಸಂಖ್ಯೆ 60ಕ್ಕೆ ಏರಿಕೆ
ಧಾರವಾಡ ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡದಲ್ಲಿ ಮತ್ತೆ ಮೂವರಿಗೆ ಕೊರೊನಾ ಪಾಸಿಟಿವ್..ಸೋಂಕಿತರ ಸಂಖ್ಯೆ 60ಕ್ಕೆ ಏರಿಕೆ
21 ವರ್ಷದ ಮಹಿಳೆ (ಪಿ-5380) ಹಾಗೂ 11 ವರ್ಷದ ಬಾಲಕಿ (ಪಿ-5382)ಗೆ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆ ಸೋಂಕು ಕಾಣಿಸಿಕೊಂಡಿದ್ದು, 24 ವರ್ಷದ ಮಹಿಳೆಗೆ (ಪಿ-5381) ಕೊರೊನಾ ಸೋಂಕಿತನ ಸಂಪರ್ಕದಿಂದ ಸೋಂಕು ತಗುಲಿದೆ.
ಸೋಂಕಿತರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.