ಧಾರವಾಡ: ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿದ್ದು ಉತ್ತರ ಕರ್ನಾಟಕದಲ್ಲಿ ಒಂದೂ ಕೂಡ ವೈರಸ್ ಟೆಸ್ಟಿಂಗ್ ಲ್ಯಾಬ್ ಇಲ್ಲದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಉತ್ತರ ಕರ್ನಾಟಕದಲ್ಲಿ ಕೊರೊನಾ ಟೆಸ್ಟ್ ಲ್ಯಾಬ್ ಸ್ಥಾಪಿಸುವಂತೆ ಒತ್ತಾಯ
ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿದ್ದು ಉತ್ತರ ಕರ್ನಾಟಕದಲ್ಲಿ ವೈರಸ್ ಟೆಸ್ಟ್ ಲ್ಯಾಬ್ ಇಲ್ಲದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಟೆಸ್ಟ್ ಲ್ಯಾಬ್ ಸ್ಥಾಪಿಸುವಂತೆ ಒತ್ತಾಯ
ಉತ್ತರ ಕರ್ನಾಟಕದ 14 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಂದೇ ಒಂದು ಲ್ಯಾಬ್ ಇಲ್ಲ. ಉತ್ತರ ಕರ್ನಾಟಕದಲ್ಲೇ ಕೊರೊನಾ ಸೋಂಕಿತರು ಹೆಚ್ಚಿದ್ದರೂ ಸಹ ಉತ್ತರ ಕರ್ನಾಟಕಕ್ಕೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಹ್ಯಾಷ್ ಟ್ಯಾಗ್ ಮೂಲಕ ಉತ್ತರ ಕರ್ನಾಟಕ ಭಾಗಕ್ಕೂ ಲ್ಯಾಬ್ ನೀಡುವಂತೆ ಒತ್ತಾಯ ಮಾಡಲಾಗುತ್ತಿದೆ.
ಹ್ಯಾಷ್ ಟ್ಯಾಗ್ ಅಭಿಯಾನಕ್ಕೆ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಸಹ ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಕರ್ನಾಟಕದಲ್ಲಿ ಲ್ಯಾಬ್ ಆರಂಭಿಸುವಂತೆ ಮಾಜಿ ಶಾಸಕ ಕೋನರೆಡ್ಡಿ ಆಗ್ರಹಿಸಿದ್ದಾರೆ.