ಕರ್ನಾಟಕ

karnataka

ETV Bharat / city

ಎಟಿಎಂಗಳಲ್ಲಿ ಥರ್ಮಲ್ ಸ್ಕ್ಯಾನರ್ ಅಳವಡಿಸಿ, ಬ್ಯಾಂಕ್‌ ಮ್ಯಾನೇಜರ್‌ಗಳಿಗೆ ಡಿಸಿ ಸೂಚನೆ.. - Install thermal scanner at ATMs, DC notification to bank managers

ಕೋವಿಡ್-19 ರೋಗ ತಡೆಗಟ್ಟುವ ಉದ್ದೇಶದಿಂದ ಎ.ಟಿ.ಎಮ್ ಗಳಿಗೆ ಬರುವ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಥರ್ಮಲ್ ಸ್ಕ್ಯಾನರ್ ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಎಲ್ಲಾ ಬ್ಯಾಂಕ್ ಮ್ಯಾನೇಜರ್‌ಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

covid 19 Install thermal scanner at ATMs, DC notification to bank managers
ಎ.ಟಿ.ಎಮ್ ಗಳಲ್ಲಿ ಥರ್ಮಲ್ ಸ್ಕ್ಯಾನರ್ ಅಳವಡಿಸಿ, ಬ್ಯಾಂಕ್‌ ಮ್ಯಾನೇಜರ್‌ಗಳಿಗೆ ಡಿಸಿ ಸೂಚನೆ

By

Published : Apr 12, 2020, 7:28 PM IST

ಧಾರವಾಡ :ಜಿಲ್ಲೆಯಲ್ಲಿ ಕೋವಿಡ್-19 ರೋಗ ತಡೆಗಟ್ಟುವ ಉದ್ದೇಶದಿಂದ ಎಟಿಎಂಗಳಿಗೆ ಬರುವ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಥರ್ಮಲ್ ಸ್ಕ್ಯಾನರ್‌ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಎಲ್ಲಾ ಬ್ಯಾಂಕ್ ಮ್ಯಾನೇಜರ್‌ಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಎಟಿಎಂಗಳಿಗೆ ಬರುವ ಗ್ರಾಹಕರ ಆರೋಗ್ಯವನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಲು ಒಬ್ಬ ನುರಿತ ಸಿಬ್ಬಂದಿಯನ್ನು ನಿಯೋಜಿಸಬೇಕು. ಎಲ್ಲಾ ವಿವರಗಳನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿಕೊಂಡು ಕಡ್ಡಾಯವಾಗಿ ಪ್ರತಿ ಬ್ಯಾಂಕ್‌ಗಳ ಎಟಿಎಂಗಳಲ್ಲಿ ಗ್ರಾಹಕರ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಇವರಿಗೆ ಸಲ್ಲಿಸಲು ಅಗತ್ಯ ಕ್ರಮ ಜರುಗಿಸುಬೇಕು ಎಂದು ತಿಳಿಸಲಾಗಿದೆ.

ABOUT THE AUTHOR

...view details