ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ (rain in Dharwad) ಹಿನ್ನೆಲೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಅಪಾರ ಪ್ರಮಾಣದ ಬೆಳೆ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.
ಭಾರಿ ಮಳೆಗೆ ನೀರಸಾಗರ ಜಲಾಶಯದ ನೀರು ಹೆಚ್ಚಿ ಹೊರ ಹರಿದ ಪರಿಣಾಮ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ಎಮ್ಮೆಟ್ಟಿ, ನೀರಸಾಗರ, ಮುತ್ತಗಿ, ಗಂಬ್ಯಾಪುರ ಗ್ರಾಮಗಳ ರೈತರ ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿಯಾಗಿದೆ.