ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಗಳ ಮದುವೆ ಹಿನ್ನೆಲೆ ಕೇಂದ್ರದ ಹಲವಾರು ಮಂತ್ರಿಗಳು ನಗರಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗುತ್ತದೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಕೊನೆಗೂ ರಸ್ತೆಗುಂಡಿಗಳನ್ನು ಮುಚ್ಚಲು ರಾಷ್ಟ್ರೀಯ ನಾಯಕರೇ ಬರಬೇಕಾಯಿತಾ ಎಂದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಹೌದು, ಹೆಸರಿಗೆ ಸ್ಮಾರ್ಟ್ ಸಿಟಿ ಆದ್ರೆ ನಗರದ ಬಹುತೇಕ ರಸ್ತೆಗಳು ಹೊಂಡ ಮಯವಾಗಿವೆ. ಇದರಿಂದ ದಿನ ನಿತ್ಯ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಈ ಕುರಿತು ಅವಳಿನಗರದ ಜನರು ಡಾಂಬರೀಕರಣ ಇರಲಿ ತಗ್ಗು - ಗುಂಡಿಗಳನ್ನಾದರು ಮುಚ್ಚಲಿ ಎಂದು ಸಾಕಷ್ಟು ಬಾರಿ ಪಾಲಿಕೆ ಅಧಿಕಾರಿಗಳಿಗೆ ಲಿಖಿತ ಹಾಗೂ ಮೌಖಿಕವಾಗಿ ವಿನಂತಿಸಿಕೊಂಡಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ಡೋಂಟ್ ಕೇರ್ ಎಂಬಂತೆ ವರ್ತಿಸುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.