ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವೆಯಲ್ಲಿ ಅನುಸರಿಸಬೇಕಾದ ನಿಯಮಗಳು ಹಾಗೂ ಸಿಬ್ಬಂದಿ ಕಾರ್ಯಕ್ಷಮತೆ ಕುರಿತು ಸಾರಿಗೆ ಸಚಿವ ಲಕ್ಷ್ಮಣಸವದಿ ಮಾಹಿತಿ ನೀಡಿದರು.
ವಾಯುವ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಜತೆ ಡಿಸಿಎಂ ಸವದಿ ಸಭೆ - ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಸಂಸ್ಥೆ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಸಂಸ್ಥೆಯ, ಗೋಕುಲ್ ರಸ್ತೆಯಲ್ಲಿರುವ ಕೇಂದ್ರಕಚೇರಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣಸವದಿ ಅವರು ಅಧಿಕಾರಿಗಳೊಂದಿಗೆ ಸಾರಿಗೆ ಸೇವೆ ಪ್ರಗತಿ ಪರಿಶೀಲನಾ ಸಭೆನಡೆಸಿದರು.
ವಾಯುವ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿಎಂ ಸವದಿ
ಲಾಕ್ಡೌನ್ ಸಂದರ್ಭದಲ್ಲಿ ಕೂಡ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವೆಯಲ್ಲಿ ಅನುಸರಿಸಬೇಕಾದ ನಿಯಮಗಳು ಹಾಗೂ ಸಿಬ್ಬಂದಿ ಕಾರ್ಯಕ್ಷಮತೆ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ್, ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ, ಸಂಸ್ಥೆಯ ಅಧ್ಯಕ್ಯ ವಿ.ಎಸ್ ಪಾಟೀಲ್, ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.