ಧಾರವಾಡ:ಮೈತ್ರಿ ಸರ್ಕಾರ ಪತನದ ಬಳಿಕ ಅಧಿಕಾರದ ಗದ್ದುಗೆಗೇರಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೊಸ ಸವಾಲು ಎದುರಾಗಿದೆ. ಹಲವು ನಾಯಕರು ಮಂತ್ರಿಗಿರಿಗೆ ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಲಾಬಿ ನಡೆಸುತ್ತಿದ್ದು, ಇತ್ತ ಧಾರವಾಡಲ್ಲೂ ಕೆಲ ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿರುವುದು ಕೇಳಿಬರುತ್ತಿದೆ.
ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರು ಏನಾದರೂ ಮಾಡಿ ಈ ಬಾರಿ ಸಚಿವರಾಗಲೇಬೇಕು ಎಂಬ ಪಣ ತೊಟ್ಟಂತಿದೆ. 2ನೇ ಬಾರಿ ಶಾಸಕರಾದ ಅವರಿಗೆ ಸಚಿವ ಸ್ಥಾನಕ್ಕೆ ಭಾರೀ ಕಸರತ್ತು ನಡೆದಿದೆ. ಕೆಲವು ಸಂಘಟನೆಗಳು, ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಚಿವ ಸ್ಥಾನಕ್ಕೆ ಒತ್ತಾಯಿಸುತ್ತಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ.
ಬೆಲ್ಲದಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪಗೆ ಒತ್ತಾಯ - demanding minister post faor bellada
ಮೈತ್ರಿ ಸರ್ಕಾರ ಪತನದ ಬಳಿಕ ಅಧಿಕಾರದ ಗದ್ದುಗೆಗೇರಿದ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೊಸ ಸವಾಲು ಎದುರಾಗಿದೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಚಲವಾದಿ ಮಹಾಸಭಾ ಸಂಘಟನೆ ಮತ್ತು ನಳಿನಾ ಮಹಿಳಾ ನಗೆ ಕೂಟ ಒತ್ತಾಯಿಸಿದೆ.
ಇಂದು ಹಲವು ಸಂಘಟನೆ ಪದಾಧಿಕಾರಿಗಳು, ಲಿಂಗಾಯತ ಸಮುದಾಯದ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸಿ ಬೆಲ್ಲದಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಚಲವಾದಿ ಮಹಾಸಭಾ ಸಂಘಟನೆ ಕಾರ್ಯದರ್ಶಿ ರಾಜೇಶ್ ಕೂಟನ್ ಮತ್ತು ನಳಿನಾ ಮಹಿಳಾ ನಗೆ ಕೂಟದ ಅಧ್ಯಕ್ಷೆ ನಳಿನಾಕ್ಷಿ ಅವರು ಪ್ರತ್ಯೇಕ ಪತ್ರಿಕಾಗೋಷ್ಠಿ ಮೂಲಕ ಮಂತ್ರಿ ಸ್ಥಾನಕ್ಕೆ ಒತ್ತಾಯಿಸಿದರು.
ಬೆಲ್ಲದ ಅವರು ಉದ್ಯಮ ಕ್ಷೇತ್ರದಲ್ಲಿ ಅನುಭವ ಉಳ್ಳವರು. ಲಿಂಗಾಯತ ಕೋಟಾದಲ್ಲಿ ಸಚಿವ ಸ್ಥಾನ ನೀಡಬೇಕು ಅಂತ ಆಗ್ರಹಿಸಿದರು. ಜೊತೆಗೆ ಶಾಸಕ ನೆಹರೂ ಓಲೇಕಾರ ಅವರಿಗೂ ಸಚಿವ ಸ್ಥಾನ ನೀಡಬೇಕು ಅಂತಾ ಒತ್ತಾಯಿಸಿದರು.