ಧಾರವಾಡ: ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ್ದ ಧಾರವಾಡ ಕಟ್ಟಡ ದುರಂತದ ವೇಳೆ ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸಿ, 56 ಜನರ ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಂಬುಲೆನ್ಸ್ ಸಿಬ್ಬಂದಿಗಳಿಗೆ ಸನ್ಮಾನ ಮಾಡಲಾಯಿತು.
ಧಾರವಾಡ ಕಟ್ಟಡ ದುರಂತ: ಹಗಲು ರಾತ್ರಿ ಸೇವೆ ಸಲ್ಲಿಸಿದ ಆಂಬುಲೆನ್ಸ್ ಸಿಬ್ಬಂದಿಗೆ ಸನ್ಮಾನ - undefined
ಧಾರವಾಡ ಕಟ್ಟಡ ದುರಂತದ ವೇಳೆ 56 ಜನರ ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆಂಬುಲೆನ್ಸ್ ಚಾಲಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಜಿವಿಕೆ ಸಂಸ್ಥೆ ವತಿಯಿಂದ ಸನ್ಮಾನ ಮಾಡಲಾಯಿತು.
ಆಂಬುಲೆನ್ಸ್ ಸಿಬ್ಬಂದಿಗಳಿಗೆ ಸನ್ಮಾನ
ನಗರದ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ವೇಳೆ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿ 24 ಗಂಟೆಗಳ ನಿರಂತರ ತುರ್ತು ವೈದ್ಯಕೀಯ ಸೇವೆಯನ್ನು ಒದಗಿಸಲು ಕಾರಣಕರ್ತರಾದ ಆಂಬುಲೆನ್ಸ್ ಚಾಲಕರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಜಿವಿಕೆ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಸ್ಪತ್ರೆಯ ಸರ್ಜನ್ ಗಿರಿಧರ್ ಕುಕನೂರ್ ಆಂಬುಲೆನ್ಸ್ ಸಿಬ್ಬಂದಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.