ಕರ್ನಾಟಕ

karnataka

ETV Bharat / city

ಧಾರವಾಡ: ಕೃಷಿ ಕಾಯ್ದೆ ವಿರೋಧಿಸಿ ನಾಳೆ ಬೈಪಾಸ್ ರಸ್ತೆ ತಡೆ

ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು, ಹೋರಾಟನಿರತ ರೈತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ನಾಳೆ ಧಾರವಾಡದ ಯರಿಕೊಪ್ಪ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಲಾಗುತ್ತಿದೆ.

ಹೆದ್ದಾರಿ ಬಂದ್​ಗೆ ಬೆಂಬಲ ಸೂಚಿಸಿದ ಸಂಘಟನೆಗಳು
ಹೆದ್ದಾರಿ ಬಂದ್​ಗೆ ಬೆಂಬಲ ಸೂಚಿಸಿದ ಸಂಘಟನೆಗಳು

By

Published : Feb 5, 2021, 1:59 PM IST

ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕಿಸಾನ್ ಸಂಯುಕ್ತ ಮೋರ್ಚಾದ ಅಖಿಲ ಭಾರತ ಸಮಿತಿ ನಾಳೆ ಕರೆ ನೀಡಿರುವ ಹೆದ್ದಾರಿ ಬಂದ್​ಗೆ ಧಾರವಾಡದಲ್ಲಿ ಅನೇಕ ಸಂಘಟನೆಗಳು ಬೆಂಬಲ ಸೂಚಿಸಿವೆ.

ಹೆದ್ದಾರಿ ಬಂದ್​ಗೆ ಬೆಂಬಲ ಸೂಚಿಸಿದ ಸಂಘಟನೆಗಳು

ಧಾರವಾಡದ ಸಂಯುಕ್ತ ಹೋರಾಟ ರೈತ, ಕಾರ್ಮಿಕ, ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಯರಿಕೊಪ್ಪ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ಮೂರು ಗಂಟೆಗಳ ಕಾಲ ರಸ್ತೆ ತಡೆ ನಡೆಸಲಾಗುವುದು ಎಂದು ರೈತ ಕೃಷಿ ಕಾರ್ಮಿಕರ ಸಂಘಟನೆ ಹೋರಾಟಗಾರ ಲಕ್ಷ್ಮಣ ಜಡಗಣ್ಣವರ ಈಟಿವಿ ಭಾರತಕ್ಕೆ ತಿಳಿಸಿದರು.

ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು, ಹೋರಾಟನಿರತ ರೈತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯಬೇಕು. ಹೋರಾಟದ ಸಮಯದಲ್ಲಿ ಜಪ್ತಿ ಮಾಡಲಾದ ವಾಹನಗಳನ್ನು ಬಿಡುಗಡೆಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details