ಹುಬ್ಬಳ್ಳಿ :ತುರ್ತು ಸ್ಪಂದನ ವ್ಯವಸ್ಥೆ ಸಂಖ್ಯೆ 112ಕ್ಕೆ ನಿಯೋಜಿಸಲಾಗಿರುವ ಹೊಯ್ಸಳ ಗಸ್ತು ವಾಹನಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬುರಾಮ್ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಅವರು, ತುರ್ತು ಸೇವೆಗೆ ಕರೆ ಮಾಡಿದ 15 ಸೆಕೆಂಡುಗಳಲ್ಲಿ ಕರೆ ಸ್ವೀಕರಿಸಿ, ಹತ್ತು ನಿಮಿಷದ ಒಳಗಾಗಿ ಅಗತ್ಯ ಪೊಲೀಸ್ ನೆರವು ಒದಗಿಸಲಾಗುವುದು. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರದ ನಿರ್ದೇಶನದಂತೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ 15 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 15 ತುರ್ತು ಸ್ಪಂದನ ವ್ಯವಸ್ಥೆ ವಾಹನಗಳನ್ನು ನಿಯೋಜಿಸಲಾಗಿದೆ. ಈ ವಾಹನಗಳು 24 ಗಂಟೆಯೂ ಕಾರ್ಯ ನಿರ್ವಹಿಸಲಿವೆ. ಕರೆ ಬಂದ ತಕ್ಷಣ ಸ್ಥಳಕ್ಕೆ ಧಾವಿಸುವ ಪೊಲೀಸ್ ತಂಡವು ಅಗತ್ಯ ಸಹಾಯ ಒದಗಿಸುವುದಾಗಿ ತಿಳಿಸಿದರು.