ಧಾರವಾಡ: ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 66 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. 400 ವಿದ್ಯಾರ್ಥಿಗಳು ಮೆಡಿಕಲ್ ಕಾಲೇಜಿನಲ್ಲಿ ಇದ್ದಾರೆ. 300 ಜನ ವಿದ್ಯಾರ್ಥಿಗಳಿಗೆ ಈಗಾಗಲೇ ಟೆಸ್ಟ್ ಮಾಡಲಾಗಿದೆ. ಅವರ ವರದಿಗಾಗಿ ಕಾಯುತ್ತಿದ್ದೇವೆ, ಎಸ್ಡಿಎಂನಲ್ಲಿ 3,000 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಎಲ್ಲರಿಗೂ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದರು.
ಈಗಾಗಲೇ ಎರಡು ವಸತಿ ನಿಲಯಗಳನ್ನು ಸೀಲ್ಡೌನ್ ಮಾಡಲಾಗಿದೆ. ವಿದ್ಯಾರ್ಥಿಗಳು ಕ್ವಾರಂಟೈನ್ಲ್ಲಿದ್ದಾರೆ. ಈ ಕುರಿತು ಜಿಲ್ಲಾಡಳಿತ ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೆಲವು ವಿದ್ಯಾರ್ಥಿಗಳು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಅಂತವರಿಗೂ ಸಹ ಕೋವಿಡ್ ದೃಢಪಟ್ಟಿದೆ. ಎಲ್ಲರೂ ಆರಾಮಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಧಾರವಾಡದಲ್ಲಿ ಕೊರೊನಾ ಹಾವಳಿ.. ಎಸ್.ಡಿ.ಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ!
ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಶವಂತ ಮದೀನಕರ ಹಾಗೂ ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಮಾಹಿತಿ ನೀಡಿದರು.